11ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು;
12ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ
13ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
14ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,
15ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು.