13ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
14ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,
15ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು.
16ಆದರೆ ನೀನು ತಣ್ಣಗಾಗಲಿ ಇಲ್ಲವೆ ಬೆಚ್ಚಗಾಗಲಿ ಇಲ್ಲದೆ ಉಗುರು ಬೆಚ್ಚಗಿರುವದರಿಂದ ನಿನ್ನನ್ನು ನಾನು ನನ್ನ ಬಾಯೊಳಗಿಂದ ಕಾರುವೆನು.
17ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.