9ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು.
10ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--
11ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.