ಪ್ರಕಟನೆ 4

ಕೂತಿದ್ದಾತನು ಸೂರ್ಯಕಾಂತ ಪದ್ಮರಾಗ ಕಲ್ಲುಗಳಂತೆ ಕಾಣುತ್ತಿದ್ದನು; ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆ ಬಿಲ್ಲು ಇತ್ತು.

Revelation 4:3 (UKJV) And he that sat was to look upon like a jasper and a sardine stone: and there was a rainbow round about the throne, in sight like unto an emerald.

1ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿ ತೆರೆದಿದ್ದ ಬಾಗಿಲು ಕಾಣಿಸಿತು; ನನ್ನ ಸಂಗಡ ತುತೂರಿಯು ಮಾತನಾಡುತ್ತದೊ ಎಂಬಂತೆ ನಾನು ಮೊದಲು ಕೇಳಿದ್ದ ಧ್ವನಿಯು ನನಗೆ ಕೇಳಿಸಿತು; ಅದು--ಇಲ್ಲಿಗೆ ಮೇಲಕ್ಕೇರಿ ಬಾ, ಮುಂದೆ ಆಗತಕ್ಕವುಗಳನ್ನು ನಾನು ನಿನಗೆ ತೋರಿ ಸ

2ಕೂಡಲೆ ನಾನು ಆತ್ಮವಶ ನಾದೆನು; ಆಗ ಇಗೋ, ಪರಲೋಕದಲ್ಲಿ ಒಂದು ಸಿಂಹಾಸನವಿತ್ತು; ಸಿಂಹಾಸನದ ಮೇಲೆ ಒಬ್ಬಾತನು ಕೂತಿದ್ದನು.

3ಕೂತಿದ್ದಾತನು ಸೂರ್ಯಕಾಂತ ಪದ್ಮರಾಗ ಕಲ್ಲುಗಳಂತೆ ಕಾಣುತ್ತಿದ್ದನು; ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆ ಬಿಲ್ಲು ಇತ್ತು.

4ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ತನಾಲ್ಕು ಆಸನಗಳಿದ್ದವು; ಆ ಆಸನಗಳ ಮೇಲೆ ಬಿಳೀ ವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತು ನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟ ಗಳಿದ್ದವು.

5ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು.

Kannada Bible (Old Version), Bible Society of India.