4ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ತನಾಲ್ಕು ಆಸನಗಳಿದ್ದವು; ಆ ಆಸನಗಳ ಮೇಲೆ ಬಿಳೀ ವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತು ನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟ ಗಳಿದ್ದವು.
5ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು.
6ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.
7ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು.
8ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ