7ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು.
8ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ
9ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು.
10ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--
11ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.