19ಆದರೆ--ಇಸ್ರಾಯೇಲ್ಯರು ತಿಳುಕೊಳ್ಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಈ ವಿಷಯದಲ್ಲಿ--ನನ್ನ ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡು ಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.
20ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ--ನನ್ನನ್ನು ಹುಡುಕದವರಿಗೆ ಸಿಕ್ಕಿದೆನು, ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.
21ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.