26ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.
27ನಾನು ಅವರ ಪಾಪಗಳನ್ನು ತೆಗೆದು ಹಾಕುವದು ಅವರ ಸಂಗಡ ಮಾಡಿಕೊಂಡ ನನ್ನ ಒಡಂಬಡಿಕೆಯಾಗಿದೆ ಎಂಬದು.
28ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ.
29ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ.
30ಕಳೆದುಹೋದ ಕಾಲಗಳಲ್ಲಿ ನೀವು ದೇವರನ್ನು ನಂಬದೆ ಇದ್ದೀರಿ; ಆದಾಗ್ಯೂ ಅವರ ಅಪನಂಬಿಕೆಯ ಮೂಲಕ ನೀವು ಈಗ ಹೇಗೆ ಕರುಣೆ ಯನ್ನು ಹೊಂದಿದ್ದೀರೋ