1ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು.
2ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು.
3ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು.