ರೋಮರಿಗೆ 15

ಹೀಗೆ ನೀವು ಏಕ ಮನಸ್ಸಿನಿಂದಲೂ ಒಂದೇ ಬಾಯಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.

Romans 15:6 (UKJV) That all of you may with one mind and one mouth glorify God, even the Father of our Lord Jesus Christ.

4ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.

5ನೀವು ಕ್ರಿಸ್ತ ಯೇಸು ವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ತಾಳ್ಮೆಯೂ ಆದರಣೆಯೂ ಉಳ್ಳ ದೇವರು ನಿಮಗೆ ಅನುಗ್ರಹಿಸಲಿ.

6ಹೀಗೆ ನೀವು ಏಕ ಮನಸ್ಸಿನಿಂದಲೂ ಒಂದೇ ಬಾಯಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.

7ಆದದರಿಂದ ಕ್ರಿಸ್ತನು ಸಹ ನಿಮ್ಮನ್ನು ದೇವರ ಮಹಿಮೆಗಾಗಿ ಸೇರಿಸಿಕೊಂಡಂತೆ ನೀವೂ ಒಬ್ಬರ ನ್ನೊಬ್ಬರು ಸೇರಿಸಿಕೊಳ್ಳಿರಿ.

8ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.

Kannada Bible (Old Version), Bible Society of India.