18ಆತನ ಚಿತ್ತವನ್ನು ತಿಳಿದವನಾಗಿ ನ್ಯಾಯಪ್ರಮಾಣದಿಂದ ಶಿಕ್ಷಿತ ನಾಗಿದ್ದು ಅತ್ಯುತ್ತಮವಾದವುಗಳನ್ನು ಮೆಚ್ಚುವವನಾ ಗಿದ್ದೀ;
19ಇದಲ್ಲದೆ ನೀನೇ ಕುರುಡರ ಮಾರ್ಗದರ್ಶ ಕನೂ ಕತ್ತಲೆಯಲ್ಲಿರುವವರಿಗೆ ಬೆಳಕೂ
20ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ.
21ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ?
22ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ?