8(ದೂಷಿಸಲ್ಪಡುವ ಪ್ರಕಾರವಾಗಿ ಯೂ ನಾವು ಹೇಳುತ್ತೇವೆಂದು ಕೆಲವರು ಅನ್ನುವ ಪ್ರಕಾರವಾಗಿಯೂ)--ಒಳ್ಳೆಯದು ಬರುವ ಹಾಗೆ ನಾವು ಕೆಟ್ಟದ್ದನ್ನು ಮಾಡೋಣವೇ? ಅಂಥವರ ದಂಡ ನೆಯು ನ್ಯಾಯವಾಗಿದೆ.
9ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ.
10ಬರೆದಿರುವ ಪ್ರಕಾರ--ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;
11ತಿಳುವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನೂ ಇಲ್ಲ.
12ಎಲ್ಲರೂ ದಾರಿತಪ್ಪಿದವರಾಗಿ ಕೆಲಸಕ್ಕೆ ಬಾರದವರಾದರು, ಒಳ್ಳೆ ಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.