16ಅವರ ದಾರಿಗಳಲ್ಲಿ ನಾಶ ಸಂಕಟಗಳು ಉಂಟಾಗುತ್ತವೆ.
17ಅವರು ಸಮಾಧಾನದ ಮಾರ್ಗ ವನ್ನೇ ಅರಿತವರಲ್ಲ;
18ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ.
19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
20ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.