19ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ.
20ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು.
21ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು.
22ಆದದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಯೆಂದು ಎಣಿಸಲ್ಪಟ್ಟಿತು.
23ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟದ್ದು ಅವನಿಗೋಸ್ಕರ ಮಾತ್ರವಲ್ಲದೆ