ರೋಮರಿಗೆ 4

ಹಾಗಾದರೆ ಬರಹವು ಹೇಳುವ ದೇನು? ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು.

Romans 4:3 (UKJV) For what says the scripture? Abraham believed God, and it was counted unto him for righteousness.

1ಹಾಗಾದರೆ ನಮ್ಮ ಮೂಲಪಿತೃವಾಗಿರುವ ಅಬ್ರಹಾಮನು ಶರೀರಸಂಬಂಧವಾಗಿ ಏನು ಪಡೆದುಕೊಂಡನೆಂದು ಹೇಳಬೇಕು?

2ಅಬ್ರಹಾ ಮನು ಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಅಸ್ಪದವಿರುವದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ.

3ಹಾಗಾದರೆ ಬರಹವು ಹೇಳುವ ದೇನು? ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು.

4ಕೆಲಸ ಮಾಡಿದವನಿಗೆ ಬರುವ ಸಂಬಳವು ಕೃಪೆಯಿಂದ ದೊರಕುವಂಥದ್ದೆಂದು ಎಣಿಕೆ ಯಾಗುವದಿಲ್ಲ; ಅದು ಸಲ್ಲತಕ್ಕದ್ದೇ.

5ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.

Kannada Bible (Old Version), Bible Society of India.