18ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು.
19ಒಬ್ಬ ಮನುಷ್ಯನ ಅವಿಧೇಯತ್ವದಿಂದ ಅನೇಕರು ಹೇಗೆ ಪಾಪಿಗಳಾ ದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಅನೇಕರು ನೀತಿವಂತರಾಗುವರು.
20ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.
21ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.