8ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ.
9ಈ ವಾಗ್ದಾನದ ಮಾತೇನಂ ದರೆ--ಮುಂದಿನ ವರುಷದ ಇದೇ ಕಾಲದಲ್ಲಿ ನಾನು ಬರುವೆನು. ಆಗ ಸಾರಳಿಗೆ ಮಗನು ಇರುವನು ಎಂಬದೇ.
10ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ಒಬ್ಬನಿಂದ ಅಂದರೆ ನಮ್ಮ ಪಿತೃವಾದ ಇಸಾಕನಿಂದ ಗರ್ಭಿಣಿಯಾದಾಗ
11(ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ)
12ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು ಎಂದು ಆಕೆಗೆ ಹೇಳಲ್ಪಟ್ಟಿದೆ.