11ಈಗ ನನ್ನ ಮಗಳೇ, ನೀನು ಭಯಪಡಬೇಡ; ನಿನಗೆ ಬೇಕಾಗಿರುವದನ್ನು ನಿನಗೆ ಮಾಡುವೆನು; ಯಾಕಂದರೆ ನೀನು ಗುಣವತಿ ಯಾದ ಸ್ತ್ರೀ ಎಂದು ಪಟ್ಟಣದಲ್ಲಿರುವ ನನ್ನ ಜನರೆಲ್ಲರು ಬಲ್ಲರು.
12ಈಗ ನಾನು ನಿನ್ನ ಸವಿಾಪ ಬಂಧು ವಾಗಿದ್ದೇನೆ ಎಂಬದು ನಿಜವೇ; ಆದರೆ ನನಗಿಂತಲೂ ಸವಿಾಪಸ್ಥನಾದ ಬಂಧುವು ಒಬ್ಬನಿದ್ದಾನೆ.
13ಈ ರಾತ್ರಿಯಲ್ಲಿ ಇಲ್ಲಿರು; ನಾಳೆ ಬೆಳಿಗ್ಗೆ ಅವನು ನಿನಗೆ ಸಂಬಂಧಿಕನ ಕಾರ್ಯ ಮಾಡಿದರೆ ಒಳ್ಳೇದಾಯಿತು; ಅವನು ನಿನಗೆ ಸಂಬಂಧಿಕನ ಕಾರ್ಯಮಾಡಲು ಮನಸ್ಸಿಲ್ಲದೆ ಇದ್ದರೆ ಕರ್ತನ ಜೀವದಾಣೆ--ನಾನೇ ನಿನಗೆ ಸಂಬಂಧಿಕನ ಕಾರ್ಯ ಮಾಡುತ್ತೇನೆ. ಉದಯ ಕಾಲದ ವರೆಗೂ ಮಲಗಿರು ಅಂದನು.
14ಅವಳು ಹಾಗೆಯೇ ಉದಯ ಕಾಲದ ವರೆಗೂ ಅವನ ಪಾದ ಗಳ ಬಳಿಯಲ್ಲಿ ಮಲಗಿದ್ದು ಒಬ್ಬನಿಗೂ ಗೊತ್ತಾಗ ಬಾರದೆಂದು ಇನ್ನೂ ಕತ್ತಲಿರುವಾಗಲೇ ಎದ್ದಳು. ಅವನು ಒಬ್ಬ ಹೆಂಗಸು ಕಣದಲ್ಲಿ ಬಂದಳೆಂದು ಯಾರಿಗೂ ತಿಳಿಯಲ್ಪಡದಿರಲಿ ಅಂದನು.
15ಇದಲ್ಲದೆ ಅವನು ನೀನು ಹೊದ್ದುಕೊಂಡಿರುವ ವಸ್ತ್ರವನ್ನು ತಂದು ಹಿಡಿ ಅಂದನು. ಅವಳು ಅದನ್ನು ಹಿಡಿದಾಗ ಅವನು ಅದ ರಲ್ಲಿ ಆರು ಸೊಲಿಗೆ ಜವೆಗೋಧಿಯನ್ನು ಅಳೆದು ಹಾಕಿ ಆಕೆಯ ಮೇಲೆ ಹೊರಿಸಿದನು. ಆಗ ಅವಳು ಪಟ್ಟಣಕ್ಕೆ ಬಂದಳು.