ರೂತು 3

ನೀನು ನಿನ್ನ ಅತ್ತೆಯ ಬಳಿಗೆ ಬರಿ ಕೈಯಾಗಿ ಹೋಗಬಾರದೆಂದು ಅವನು ಈ ಆರು ಸೊಲಿಗೆ ಜವೆಗೋಧಿಯನ್ನು ನನಗೆ ಕೊಟ್ಟನು ಅಂದಳು.

Ruth 3:17 (UKJV) And she said, These six measures of barley gave he me; for he said to me, Go not empty unto your mother in law.

15ಇದಲ್ಲದೆ ಅವನು ನೀನು ಹೊದ್ದುಕೊಂಡಿರುವ ವಸ್ತ್ರವನ್ನು ತಂದು ಹಿಡಿ ಅಂದನು. ಅವಳು ಅದನ್ನು ಹಿಡಿದಾಗ ಅವನು ಅದ ರಲ್ಲಿ ಆರು ಸೊಲಿಗೆ ಜವೆಗೋಧಿಯನ್ನು ಅಳೆದು ಹಾಕಿ ಆಕೆಯ ಮೇಲೆ ಹೊರಿಸಿದನು. ಆಗ ಅವಳು ಪಟ್ಟಣಕ್ಕೆ ಬಂದಳು.

16ಅವಳು ತನ್ನ ಅತ್ತೆಯ ಬಳಿಗೆ ಬಂದಾಗ ಅವಳ ಅತ್ತೆಯು ನನ್ನ ಮಗಳೇ, ನಿನ್ನ ಕಾರ್ಯ ಏನಾಯಿತು? ಅಂದಳು. ಆಗ ಅವಳು ಆ ಮನುಷ್ಯನು ತನಗೆ ಮಾಡಿದ್ದನ್ನೆಲ್ಲಾ ಅವಳಿಗೆ ತಿಳಿಸಿದಳು;

17ನೀನು ನಿನ್ನ ಅತ್ತೆಯ ಬಳಿಗೆ ಬರಿ ಕೈಯಾಗಿ ಹೋಗಬಾರದೆಂದು ಅವನು ಈ ಆರು ಸೊಲಿಗೆ ಜವೆಗೋಧಿಯನ್ನು ನನಗೆ ಕೊಟ್ಟನು ಅಂದಳು.

18ಅದಕ್ಕೆ ಅವಳು ನನ್ನ ಮಗಳೇ, ಈ ಕಾರ್ಯ ಏನಾಗುವದೋ ಎಂದು ನೀನು ತಿಳಿಯುವ ವರೆಗೂ ಸುಮ್ಮನೆ ಇರು; ಯಾಕಂದರೆ ಆ ಮನುಷ್ಯನು ಈ ಹೊತ್ತು ಈ ಕಾರ್ಯವನ್ನು ತೀರಿಸುವ ವರೆಗೂ ವಿಶ್ರಾಂತಿಯಲ್ಲಿ ಇರನು ಅಂದಳು.

Kannada Bible (Old Version), Bible Society of India.