1ಅವಳ ಅತ್ತೆಯಾದ ನೊವೊಮಿಯು ಅವಳಿಗೆ ನನ್ನ ಮಗಳೇ, ನಿನಗೆ ಒಳ್ಳೇದಾಗುವದಕ್ಕೋಸ್ಕರ ನಾನು ನಿನಗೆ ವಿಶ್ರಾಂತಿ ಯನ್ನು ಹುಡುಕಬೇಕಲ್ಲವೋ?
2ಈಗ ನೀನು ಯಾರ ದಾಸಿಗಳ ಸಂಗಡ ಇದ್ದಿಯೋ ಆ ಬೋವಜನು ನಮ್ಮ ಸಂಬಂಧಿಕನಾಗಿದ್ದಾನಲ್ಲಾ? ಇಗೋ, ಅವನು ರಾತ್ರಿ ಯಲ್ಲಿ ಕಣದೊಳಗೆ ಜವೆಗೋಧಿಯನ್ನು ತೂರುವನು.
3ನೀನು ಸ್ನಾನಮಾಡಿ ಎಣ್ಣೆ ಹಚ್ಚಿಕೊಂಡು ನಿನ್ನ ವಸ್ತ್ರಗಳನ್ನು ಧರಿಸಿಕೊಂಡು ಆ ಕಣಕ್ಕೆ ಹೋಗು. ಆದರೆ ಆ ಮನುಷ್ಯನು ಅನ್ನಪಾನಗಳನ್ನು ತೆಗೆದು ಕೊಳ್ಳುವ ವರೆಗೂ ಅವನಿಗೆ ನೀನು ತಿಳಿಯದಂತೆ ಮರೆಯಾಗಿರು.
4ಅವನು ಮಲಗಿಕೊಂಡಾಗ ಅವನು ಮಲಗಿರುವ ಸ್ಥಳವನ್ನು ನೀನು ತಿಳುಕೊಂಡಿದ್ದು ಹೋಗಿ ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿಕೋ. ಆಗ ನೀನು ಮಾಡಬೇಕಾದದ್ದೇನೆಂದು ಅವನು ನಿನಗೆ ತಿಳಿಸುವನು ಅಂದಳು.