3ನೀನು ಸ್ನಾನಮಾಡಿ ಎಣ್ಣೆ ಹಚ್ಚಿಕೊಂಡು ನಿನ್ನ ವಸ್ತ್ರಗಳನ್ನು ಧರಿಸಿಕೊಂಡು ಆ ಕಣಕ್ಕೆ ಹೋಗು. ಆದರೆ ಆ ಮನುಷ್ಯನು ಅನ್ನಪಾನಗಳನ್ನು ತೆಗೆದು ಕೊಳ್ಳುವ ವರೆಗೂ ಅವನಿಗೆ ನೀನು ತಿಳಿಯದಂತೆ ಮರೆಯಾಗಿರು.
4ಅವನು ಮಲಗಿಕೊಂಡಾಗ ಅವನು ಮಲಗಿರುವ ಸ್ಥಳವನ್ನು ನೀನು ತಿಳುಕೊಂಡಿದ್ದು ಹೋಗಿ ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿಕೋ. ಆಗ ನೀನು ಮಾಡಬೇಕಾದದ್ದೇನೆಂದು ಅವನು ನಿನಗೆ ತಿಳಿಸುವನು ಅಂದಳು.
5ಅದಕ್ಕೆ ಇವಳು ನೀನು ನನಗೆ ಹೇಳಿದ್ದೆಲ್ಲಾ ಮಾಡುವೆನು ಅಂದಳು.
6ಅವಳು ಆ ಕಣಕ್ಕೆ ಹೋಗಿ ತನ್ನ ಅತ್ತೆ ತನಗೆ ಆಜ್ಞಾಪಿಸಿದ ಪ್ರಕಾರವೆಲ್ಲಾ ಮಾಡಿದಳು.
7ಏನಂದರೆ, ಬೋವಜನು ತಿಂದು ಕುಡಿದು ಹೃದಯ ಸಂತೋಷ ವಾಗಿದ್ದು ಕಾಳಿನ ರಾಶಿಯ ಕೊನೆಯಲ್ಲಿ ಬಂದು ಮಲಗಿದನು. ಆಗ ಅವಳು ಮೆಲ್ಲಗೆ ಬಂದು ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿದಳು.