6ಅವಳು ಆ ಕಣಕ್ಕೆ ಹೋಗಿ ತನ್ನ ಅತ್ತೆ ತನಗೆ ಆಜ್ಞಾಪಿಸಿದ ಪ್ರಕಾರವೆಲ್ಲಾ ಮಾಡಿದಳು.
7ಏನಂದರೆ, ಬೋವಜನು ತಿಂದು ಕುಡಿದು ಹೃದಯ ಸಂತೋಷ ವಾಗಿದ್ದು ಕಾಳಿನ ರಾಶಿಯ ಕೊನೆಯಲ್ಲಿ ಬಂದು ಮಲಗಿದನು. ಆಗ ಅವಳು ಮೆಲ್ಲಗೆ ಬಂದು ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿದಳು.
8ಆದರೆ ಅರ್ಧ ರಾತ್ರಿಯಲ್ಲಿ ಆ ಮನುಷ್ಯನು ಹೆದರಿ ತಿರುಗಿಕೊಂಡಾಗ ಇಗೋ, ಒಬ್ಬ ಸ್ತ್ರೀ ತನ್ನ ಕಾಲುಗಳ ಬಳಿಯಲ್ಲಿ ಮಲಗಿದ್ದಳು.
9ಆಗ ಅವನು ನೀನು ಯಾರು ಅಂದನು. ಅದಕ್ಕವಳು ನಾನು ನಿನ್ನ ದಾಸಿಯಾದ ರೂತಳು; ನೀನು ನಿನ್ನ ದಾಸಿಯ ಮೇಲೆ ನಿನ್ನ ಅಂಚನ್ನು ಹರಡು; ಯಾಕಂದರೆ ನೀನು ಹತ್ತಿರ ಸಂಬಂಧಿಕನು ಅಂದಳು.
10ಅದಕ್ಕೆ ಅವನು ಹೇಳಿದ್ದೇನಂದರೆ ನನ್ನ ಮಗಳೇ, ಕರ್ತನಿಂದ ನಿನಗೆ ಆಶೀರ್ವಾದವಾಗಲಿ; ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದದಯೆಯು ಹೆಚ್ಚಾಗಿದೆ.