ರೂತು 4

ಇದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್‌ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು.

Ruth 4:11 (UKJV) And all the people that were in the gate, and the elders, said, We are witnesses. The LORD make the woman that has come into yours house like Rachel and like Leah, which two did build the house of Israel: and do you worthily in Ephratah, and be famous in Bethlehem:

9ಆಗ ಬೋವಜನು ಹಿರಿಯರಿಗೂ ಸಮಸ್ತ ಜನ ರಿಗೂ ನಾನು ಎಲೀಮೆಲೆಕನಿಗೆ ಇದ್ದ ಎಲ್ಲವನ್ನೂ ಕಿಲ್ಯೋನನಿಗೂ ಮಹ್ಲೋನನಿಗೂ ಇದ್ದ ಎಲ್ಲವನ್ನೂ ನೊವೊಮಿಯ ಕೈಯಿಂದ ಕೊಂಡುಕೊಂಡೆನು ಎಂಬ ದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು.

10ಇದಲ್ಲದೆ ಸತ್ತವನ ಸಹೋದರರಿಂದಲೂ ಅವನ ಸ್ಥಳದ ಬಾಗಲದಿಂದಲೂ ಅವನ ಹೆಸರು ಕಡಿದು ಹಾಕಲ್ಪಡದ ಹಾಗೆ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಕೊಂಡುಕೊಂಡೆನು.

11ಇದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್‌ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು.

12ಈ ಹುಡುಗಿಯಿಂದ ಕರ್ತನು ನಿನಗೆ ಕೊಡುವ ಸಂತಾನದಿಂದ ನಿನ್ನ ಮನೆಯೂ ತಾಮರಳು ಯೂದ ನಿಗೆ ಹೆತ್ತ ಪೆರೆಚನ ಮನೆಯ ಹಾಗೆಯೇ ಆಗಲಿ ಅಂದರು.

13ಬೋವಜನು ರೂತಳನ್ನು ತೆಗೆದುಕೊಂಡನು; ಅವಳು ಅವನಿಗೆ ಹೆಂಡತಿಯಾದಳು. ಅವನು ಅವಳನ್ನು ಕೂಡಿದಾಗ ಕರ್ತನು ಅವಳಿಗೆ ಗರ್ಭ ತೆರೆದದ್ದರಿಂದ ಅವಳು ಮಗನನ್ನು ಹೆತ್ತಳು.

Kannada Bible (Old Version), Bible Society of India.