3ಆಗ ಅವನು ಆ ಬಂಧುವಿಗೆ ಹೇಳಿದ್ದೇನಂದರೆ ಮೋವಾಬ್ ಸೀಮೆ ಯಿಂದ ತಿರಿಗಿ ಬಂದ ನೊವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನಿಗೆ ಇದ್ದ ಹೊಲದ ಪಾಲನ್ನು ಮಾರಿ ಬಿಡಬೇಕೆಂದಿರುತ್ತಾಳೆ.
4ನಾನು ನಿನಗೆ ಹೇಳಬೇಕೆಂದಿದ್ದೇನಂದರೆ -- ನಿವಾಸಿಗಳ ಮುಂದೆಯೂ ನನ್ನ ಜನರಾದ ಹಿರಿಯರ ಮುಂದೆಯೂ ಅದನ್ನು ಕೊಂಡುಕೊಂಡು ಬಿಡಿಸಿಕೊಂಡರೆ ಬಿಡಿಸಿಕೋ ಬಿಡಿಸಿಕೊಳ್ಳದಿದ್ದರೆ ನಾನು ತಿಳುಕೊಳ್ಳುವ ಹಾಗೆ ನನಗೆ ಹೇಳು; ಯಾಕಂದರೆ ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಬಿಡಿಸಿಕೊಳ್ಳುವವನು ಯಾರೂ ಇಲ್ಲ ಅಂದನು.
5ಅದಕ್ಕೆ ಅವನು ನಾನು ಬಿಡಿಸಿಕೊಳ್ಳುವೆನು ಅಂದನು. ಆಗ ಬೋವಜನು ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡು ಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿರುವ ಮೋವಾಬ್ಯಳಾದ ರೂತ ಳಿಂದಲೂ ಅದನ್ನು ಕೊಂಡುಕೊಳ್ಳಬೇಕು ಅಂದನು.
6ಅದಕ್ಕೆ ಬಂಧುವು ನಾನು ನನ್ನ ಬಾಧ್ಯತೆಯನ್ನು ಕೆಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು; ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ;
7ನಾನು ಬಿಡಿಸಿಕೊಳ್ಳಲಾರೆನು ಅಂದನು. ಬಿಡಿಸಿಕೊಳ್ಳು ವದರಲ್ಲಿಯೂ ಬದಲು ಮಾಡುವದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಪೂರ್ವದವಾಡಿಕೆ ಏನಂದರೆ, ಒಬ್ಬನು ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುವನು. ಇದು ಇಸ್ರಾಯೇಲಿನಲ್ಲಿ ಸಾಕ್ಷಿಗಾದದ್ದು.