3ಅಡವಿಯ ಗಿಡಗಳಲ್ಲಿ ಸೇಬು ಮರ ಹೇಗೋ ಕುಮಾರರಲ್ಲಿ ನನ್ನ ಪ್ರಿಯನು ಹಾಗೆಯೇ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತು ಕೊಂಡೆನು; ಅವನ ಫಲವು ನನ್ನ ರುಚಿಗೆ ಮಧುರ ವಾಗಿತ್ತು.
4ಔತಣದ ಮನೆಗೆ ನನ್ನನ್ನು ಕರಕೊಂಡು ಬಂದನು; ನನ್ನ ಮೇಲೆ ಅವನ ಧ್ವಜ ಪ್ರೀತಿಯೇ.
5ದ್ರಾಕ್ಷೆಯ ಉಂಡಿಗಳಿಂದ ನನ್ನನ್ನು ಹಿಡಿದಿರು; ಸೇಬು ಹಣ್ಣುಗಳಿಂದ ನನ್ನನ್ನು ಆದರಿಸು; ಪ್ರೀತಿಯ ದೆಸೆಯಿಂದ ಅಸ್ವಸ್ಥಳಾಗಿದ್ದೇನೆ.
6ಅವನ ಎಡಗೈ ನನ್ನ ತಲೆಯ ಕೆಳಗದೆ; ಅವನ ಬಲಗೈ ನನ್ನನ್ನು ಅಪ್ಪಿ ಕೊಳ್ಳುತ್ತದೆ.
7ಓ ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸಬೇಡಿರಿ, ಇಲ್ಲವೆ ನನ್ನ ಪ್ರಿಯನನ್ನು ಎಚ್ಚರಿಸಬೇಡಿರಿ ಎಂದು ದುಪ್ಪಿಗಳಿಂದಲೂ ಅಡವಿಯ ಜಿಂಕೆಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.