ತೀತನಿಗೆ 2

ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.

Titus 2:13 (UKJV) Looking for that blessed hope, and the glorious appearing of the great God and our Saviour Jesus Christ;

11ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.

12ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.

13ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.

14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.

15ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.

Kannada Bible (Old Version), Bible Society of India.