8ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.
9ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನ್ಯಾಯಪ್ರಮಾಣದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಯಾಕಂದರೆ ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.
10ಭೇದ ಹುಟ್ಟಿಸುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು;
11ಅಂಥವನು ಸನ್ಮಾರ್ಗ ತಪ್ಪಿದವನೂ ಪಾಪಮಾಡುವವನು ಆಗಿದ್ದಾನೆ; ತಾನು ಶಿಕ್ಷಾಪಾತ್ರನೆಂದು ತನ್ನನ್ನು ತಾನೇ ಖಂಡಿಸಿಕೊಳ್ಳುವನು.
12ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡದರಿಂದ ಅರ್ತೆಮನ ನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವದಕ್ಕೆ ಪ್ರಯತ್ನ ಮಾಡು.