10ಭೇದ ಹುಟ್ಟಿಸುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು;
11ಅಂಥವನು ಸನ್ಮಾರ್ಗ ತಪ್ಪಿದವನೂ ಪಾಪಮಾಡುವವನು ಆಗಿದ್ದಾನೆ; ತಾನು ಶಿಕ್ಷಾಪಾತ್ರನೆಂದು ತನ್ನನ್ನು ತಾನೇ ಖಂಡಿಸಿಕೊಳ್ಳುವನು.
12ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡದರಿಂದ ಅರ್ತೆಮನ ನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವದಕ್ಕೆ ಪ್ರಯತ್ನ ಮಾಡು.
13ನ್ಯಾಯಶಾಸ್ತ್ರಿಯಾದ ಜೇನನನ್ನೂ ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಸಾಗಕಳುಹಿಸು; ಅವರಿಗೇನೂ ಕೊರತೆಯಾಗಬಾರದು.
14ಅಗತ್ಯ ವಾದ ಕೊರತೆಗಳನ್ನು ನೀಗಿಸುವ ಸತ್ಕ್ರಿಯೆಗಳನ್ನು ಮಾಡುವದ ಕ್ಕಾಗಿ ನಮ್ಮವರು ಸಹ ಕಲಿತುಕೊಳ್ಳಲಿ; ಹೀಗೆ ಅವರು ನಿಷ್ಪಲರಾಗಿರುವದಿಲ್ಲ.