ತೀತನಿಗೆ 3

ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.

Titus 3:6 (UKJV) Which he shed on us abundantly through Jesus Christ our Saviour;

4ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ

5ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.

6ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.

7ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.

8ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.

Kannada Bible (Old Version), Bible Society of India.