1ಕರ್ತನಿಂದ ಹಿಂಗಾರುಮಳೆಯ ಕಾಲದಲ್ಲಿ ಮಳೆಗಾಗಿ ಬೇಡಿಕೊಳ್ಳಿರಿ. ಹೀಗೆ ಕರ್ತನು ಮಿಂಚುವ ಮೋಡಗಳನ್ನು ಮಾಡಿ ಅವರಿಗೆ ಜಡಿ ಮಳೆಯನ್ನೂ ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವನು.
2ವಿಗ್ರಹಗಳು ವ್ಯರ್ಥವಾಗಿ ಮಾತ ನಾಡಿವೆ; ಶಕುನಗಾರರು ಸುಳ್ಳನ್ನು ನೋಡಿದ್ದಾರೆ; ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ; ವ್ಯರ್ಥವಾಗಿ ಆದರಿಸುತ್ತಾರೆ; ಆದದರಿಂದ ಮಂದೆಯ ಹಾಗೆ ತಮ್ಮ ದಾರಿಯಲ್ಲಿ ಹೋಗಿದ್ದಾರೆ; ಕುರುಬನಿಲ್ಲದ ಕಾರಣ ಕಳವಳಗೊಂಡಿದ್ದಾರೆ.
3ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯಿತು; ಮೇಕೆಗಳನ್ನು ದಂಡಿಸಿದೆನು; ಸೈನ್ಯಗಳ ಕರ್ತನು ತನ್ನ ಮಂದೆಯಾಗಿರುವ ಯೆಹೂದನ ಮನೆ ತನದವರನ್ನು ದರ್ಶಿಸಿ ಅವರನ್ನು ಯುದ್ಧದಲ್ಲಿ ತನ್ನ ಘನವಾದ ಕುದುರೆಯ ಹಾಗೆ ಮಾಡಿದ್ದಾನೆ.
4ಆತ ನಿಂದ ಮೂಲೆಗಲ್ಲೂ ಆತನಿಂದ ಮೊಳೆಯೂ ಆತನಿಂದ ಯುದ್ಧದ ಬಿಲ್ಲೂ ಆತನಿಂದ ಹಿಂಸಿಸುವವರೆಲ್ಲರೂ ಕೂಡಿಕೊಂಡು ಹೊರಡುತ್ತಾರೆ.