ಜೆಕರ್ಯ 7

ಆಗ ಸೈನ್ಯಗಳ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--

Zechariah 7:4 (UKJV) Then came the word of the LORD of hosts unto me, saying,

2ಯಾವಾಗಂದರೆ, ಕರ್ತನ ಮುಖದ ಮುಂದೆ ಬೇಡಿ ಕೊಳ್ಳುವದಕ್ಕೂ

3ಸೈನ್ಯಗಳ ಕರ್ತನ ಮನೆಯಲ್ಲಿದ್ದ ಯಾಜಕರ ಸಂಗಡಲೂ ಪ್ರವಾದಿಗಳ ಸಂಗಡಲೂ ನಾನು ಮಾತನಾಡಿ--ಇಷ್ಟು ವರುಷ ಮಾಡಿದ ಪ್ರಕಾರ ಐದನೇ ತಿಂಗಳಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡು ಅಳಲೋ ಎಂದು ಹೇಳುವದಕ್ಕೂ ಅವರು ಸರೆಚರ ನನ್ನೂ ರೆಗೆಮ್‌ ಮೆಲೆಕನನ್ನೂ ಅವರ ಮನುಷ್ಯ ರನ್ನೂ ದೇವರ ಆಲಯಕ್ಕೆ ಕಳುಹಿಸಿದಾಗಲೇ ಅಂದನು.

4ಆಗ ಸೈನ್ಯಗಳ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--

5ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ?

6ನೀವು ಉಂಡು ಕುಡಿದಾಗ ನಿಮಗೆ ನೀವೇ ಉಂಡು ಕುಡಿದಿರಲ್ಲಾ?

Kannada Bible (Old Version), Bible Society of India.